ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.14, ಅಂಗಡಿ ತೆರವು ಮಾಡುವ ವಿಚಾರವಾಗಿ ವ್ಯಾಪಾರಿಯೊಬ್ಬರು ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿಯನ್ನು ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು.

ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ ನಾಯ್ಕ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರವಾಗಿ ಸುಟ್ಟು ಗಾಯಗೊಂಡಿರುವ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

Also Read  ಬೆಳಗಾವಿಯಲ್ಲಿ ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..!

ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!
Scroll to Top