ಜೋಳದ‌ ಲೋಡ್ ನಲ್ಲಿ ಅಕ್ರಮ ಗಾಂಜಾ ಸಾಗಾಟ ➤ ಭಾರೀ ಪ್ರಮಾಣದ ಗಾಂಜಾ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.11, ಪಿಕಪ್ ನಲ್ಲಿ ಜೋಳದ ಲೋಡ್‌ ಜೊತೆಗೆ ಸುಮಾರು 1.5 ಕ್ವಿಂಟಾಲ್‌ನಷ್ಟು ಭಾರೀ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಟ್ರಕೋಡಿ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಇಷ್ಟೊಂದು ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿರುವುದು ಪುತ್ತೂರಿನಲ್ಲಿ ಇದೇ ಮೊದಲು. ಪ್ರಕರಣದಲ್ಲಿ ಜೀಪು ಚಾಲಕ, ಕಾರು ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Scroll to Top