(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.11: ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳು. ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ, ಸುದರ್ಶನ ಚಕ್ರಧಾರಿಯಾಗಿ ಎಲ್ಲ ಆಪತ್ತುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
Also Read ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ