ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್

(ನ್ಯೂಸ್ ಕಡಬ) newskadaba.com ಮುಂಬೈ, ಆ,12: ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ. ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.

“ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ” ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು. ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.

Also Read  ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ

 

error: Content is protected !!
Scroll to Top