ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ

(ನ್ಯೂಸ್ ಕಡಬ) newskadaba.com, ಚಿಕ್ಕಮಗಳೂರು, ಆ. 12. ಲಾಂಗ್ ಹಿಡಿದು ಬೆದರಿಸಿ ಚಿನ್ನದ ಅಂಗಡಿಗೆ ನುಗ್ಗಿ ಮೂರು ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾದ ಘಟನೆ ಶೃಂಗೇರಿ ನಗರದಲ್ಲಿ ಇಂದು ನಡೆದಿದೆ.

ಮುಖಕ್ಕೆ ಮಾಸ್ಕ್ ಧರಿಸಿದ್ದ ಚಿನ್ನದ ಅಂಗಡಿಗೆ ಬಂದ ವ್ಯಕ್ತಿಯೋರ್ವರು ನಾಗಪ್ಪ ಶೆಟ್ಟಿ ಎಂಬುವವರ ಅಂಗಡಿಯಲ್ಲಿ ಕೆಲಸ ಮಾಡುತಿದ್ದ ಮಹಿಳಾ ಸಿಬ್ಬಂದಿಗಳಿಗೆ ಮಾರಕಾಸ್ತ್ರವನ್ನು ತೋರಿಸಿ, ದರೋಡೆ ನಡೆಸಲು ಮುಂದಾಗಿದ್ದಾನೆ. ಅಷ್ಟು ಹೊತ್ತಿಗೆ ಇನ್ನೋರ್ವ ಮಹಿಳಾ ಸಿಬ್ಬಂದಿಯು ದರೋಡೆಕೋರನ ಮೇಲೆ ಚೇರ್ ನಿಂದ ಹೊಡೆಯಲು ಯತ್ನಿಸಿದ್ದು, ಈ ವೇಳೆ ಆತ ಅಲ್ಲಿದ್ದ ಮೂರು ಚಿನ್ನದ ಸರಗಳೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಮಹಿಳೆಯ ಹಾಗೂ ಮಾಲೀಕರ ಸಮಯ ಪ್ರಜ್ಞೆಯಿಂದ ದೊಡ್ಡ ಮಟ್ಟದಲ್ಲಿ ಆಗುವ ದರೋಡೆಯೊಂದು ತಪ್ಪಿದಂತಾಗಿದೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಳ್ಳನ ಪತ್ತೆಗೆ ಬಲೆ ಬಿಸಿದ್ದಾರೆ.

Also Read  ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ- ಡಾ. ಕುಮಾರ್ ➤ ನಾಲ್ಕು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ

error: Content is protected !!
Scroll to Top