ಸುಬ್ರಹ್ಮಣ್ಯ: ಜೀಪು – ಬಸ್ ಢಿಕ್ಕಿ ► ಓರ್ವ ಮೃತ್ಯು – ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.14. ಸಮೀಪದ ಗುತ್ತಿಗಾರು ತಾಳೂರು ಎಂಬಲ್ಲಿ ಜೀಪ್ ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಜೀಪ್‌ನಡುವೆ ಸಂಭವಿಸಿದ ಅಪಘಾತದಲ್ಲಿ ಜೀಪಿನಲ್ಲಿದ್ದ ಸುಳ್ಯ ತಾಲೂಕಿನ ಹಳೇಮಜಲು ನಿವಾಸಿ ಶಶಿ ಎಂಬವರು ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top