ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ದರ್ಶನ್ ಟ್ವಿಟರ್‍ನಲ್ಲಿ  ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಕೆಲವರು ಗಜರಾಜನ ಜೊತೆ ಗಜ ನಿಂತಿದ್ದಾರೆ ಎಂದು ಹೇಳಿದ್ದಾರೆ.

Also Read  ಉಡುಪಿ: ಘಾಟ್ ನಲ್ಲಿ ವಾಹನ ಸಂಚಾರ ಎ.15 ವರೆಗೆ ನಿಷೇಧ ವಿಸ್ತರಣೆ

 

 

error: Content is protected !!
Scroll to Top