ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.

 

‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 23, ಶೀತ ಜ್ವರದಿಂದ ಬಳಲುತ್ತಿದ್ದ (ಐಎಲ್‌ಐ) 123, ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿದ್ದ (ಎಸ್‌ಎಆರ್‌ಐ) 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇತರ 88 ಜನರಿಗೆ ಯಾವ ಮೂಲದಿಂದ ಕೋವಿಡ್‌ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

Also Read  ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ

 

error: Content is protected !!
Scroll to Top