ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜೀವ್ ತ್ಯಾಗಿ ಅವರು ಪಕ್ಷಕ್ಕಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲು ಎಂದು ಸಂತಾಪ ಸೂಚಿಸಿದ್ದಾರೆ.

Also Read  ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ 'ಹುಲಿ' ರಮ್..!

 

error: Content is protected !!
Scroll to Top