ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ➤ ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು. ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Also Read  ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top