ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ,12: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯರವರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯ ರವರಿಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಸದ್ಯ ಸಿದ್ದರಾಮಯ್ಯರವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ರಿಪೋರ್ಟ್​​ ನೆಗಿಟಿವ್​ ಬಂದಿದೆ. ಹೀಗಾಗಿ ಸಿದ್ದರಾಮಯ್ಯರವರು ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಒಂದು ವಾರದ ಹಿಂದೆ ಸಿದ್ದರಾಮಯ್ಯ ಮಣಿಪಾಲ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಇತ್ತು. ಉಳಿದಂತೆ ಯಾವುದೇ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಈಗ ಮಾಜಿ ಸಿಎಂ ಆರೋಗ್ಯ ಸ್ಥಿರವಾಗಿದೆ ಎನ್ನುತ್ತಿವೆ ವೈದ್ಯಕೀಯ ಮೂಲಗಳು.

Also Read  ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

 

 

error: Content is protected !!
Scroll to Top