ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಶ್ರೀಮತಿ. ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು. ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಅಭ್ಯರ್ಥಿಯು ತನ್ನ ಎಸ್‍ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 25. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲಾ ಪ್ರಾಂಶುಪಾಲರು ದೂರವಾಣಿ ಸಂಖ್ಯೆ: 0824-2451237 ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸದಸ್ಯ ಕಾರ್ಯದರ್ಶಿ  ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

  

error: Content is protected !!
Scroll to Top