ಕಾನೂನು ಪ್ರಾಧಿಕಾರ : ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13,  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಯೊಜನೆ ಕಾರ್ಯಕ್ರಮಗಳು ಹಾಗೂ ಇತರೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಸ್ವಯಂ ಸೇವಕರು ಸಾಮಾಜಿಕ ಚಿಂತನೆ ಹಾಗೂ ಸಮಾಜಸೇವೆ ಮಾಡಬೇಕು ಎಂಬ ಇಚ್ಛೆಯುಳ್ಳ ವಿದ್ಯಾವಂತ ಯುವಕರು ಹಾಗೂ ಯುವತಿಯರು, ರಾಜಕೀಯೇತರ ಸೇವಾ ಮನೋಭಾವವುಳ್ಳವರು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರು, ಸಕಾರಿ ನೌಕರರು, ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಯಾವುದೇ ಸಂಭಾವನೆ ಇರುವುದಿಲ್ಲ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿದ ಅರೆಕಾಲಿಕ ಸ್ವಯಂ ಸೇವಕರುಗಳಿಗೆ ಗೌರವಧನವನ್ನು ನೀಡಲಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 27 ಕೊನೆಯ ದಿನ. ಅರ್ಜಿಯನ್ನು dlsamangalore@gmail.com ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಹೆಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಲಯ ಸಂಕೀರ್ಣ, ಮಂಗಳೂರು ದೂರವಾಣಿ ಸಂಖ್ಯೆ 0824-2448111, 9480024188 ಸಂಪರ್ಕಿಸುವಂತೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜಿ.ಶಿಲ್ಪ ಇವರ ಪ್ರಕಟಣೆ ತಿಳಿಸಿದೆ.

Also Read  ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು

error: Content is protected !!
Scroll to Top