ಪಂಜ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ➤ ಕಾರಿನಲ್ಲಿದ್ದವರು ಭಾರಿ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com.ಪಂಜ,ಆ.14:  ಇಲ್ಲಿನ ನೂತನ ಸಂತೆ ಮಾರುಕಟ್ಟೆಯ ಎದುರು ಮುಖ್ಯ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ  ಗುರುವಾರ ನಡೆದಿದೆ.

ಕಾರು ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು ಕಾರು ಜಖಂಗೊಂಡಿದೆ.ಬಿಪಿನ್ ಜಾಕೆ ಎಂಬವರಿಗೆ ಸೇರಿದ ಕಾರಾಗಿದ್ದು ಅಪಘಾ್ತದಲ್ಲಿ ಕಾರಿನಲ್ಲಿದ್ದವರೆಲ್ಲರೂ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿದೆ
ದುರಸ್ತಿಗೆಂದು ವಿದ್ಯುತ್ ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

Also Read  ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

error: Content is protected !!
Scroll to Top