ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಚನ್ನೈ .ಆ,14:  ಕೊರೋನಾ ಸೊಂಕಿನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ.

 

ಎಂಜಿಎಂ ಹೆಲ್ತ್‌ಕೇರ್‌ನ ಬುಲೆಟಿನ್ ಪ್ರಕಾರ, ಕೋವಿಡ್ -19 ರೋಗಲಕ್ಷಣಗಳಿಂದಾಗಿ ಎಸ್‌ಪಿಬಿಯನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಐಸಿಯುಗೆ ಸ್ಥಳಾಂತರಿ ಚಿಕಿತ್ಸೆನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿಸಿದೆ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ತಜ್ಞರ ತಂಡವು ಅವರ ಆರೋಗ್ಯವನ್ನು ಗಮನಿಸಿದ್ದು, ಅವರ ಹಿಮೋಡೈನಮಿಕ್ ಮತ್ತು ಕ್ಲಿನಿಕಲ್ ನಿಯತಾಂಕಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಅಂತ ತಿಳಿಸಿದೆ.

Also Read  ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

 

error: Content is protected !!
Scroll to Top