(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಮೈಸೂರು ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಕಾಲೇಜಿನಲ್ಲಿ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಇದರ ವತಿಯಿಂದ 2020-21ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸುಗಳ ವಿವರ ಇಂತಿವೆ: ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ ಫಾರ್ ದಿ ವಿಷ್ಯುವಲಿ ಇಂಪೇರ್ಡ್,
ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊಂದಿಗೆ ತೇರ್ಗಡೆ ಹಾಗೂ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು. ಜ್ಯುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ ಕೋರ್ಸಿಗೆ ಸಾಮಾನ್ಯ (ವಿಶೇಷಚೇತನರಲ್ಲದ) ಅಭ್ಯರ್ಥಿಗಳು ಸಹ ಜೆಎಸ್‍ಎಸ್ ಮಹಾವಿದ್ಯಾಪೀಠದ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಸೌಲಭ್ಯ ಕಲ್ಪಿಸಲಾಗಿದೆ.
ಪ್ರವೇಶಕ್ಕೆ ಅರ್ಜಿಗಳನ್ನು ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ಮೈಸೂರು – 6, ವಿಳಾಸದಿಂದ ಪಡೆಯಬಹುದು.. (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ 100 ಹಾಗೂ ಎಸ್.ಸಿ/ಎಸ್.ಟಿ/ಸಿ-1 ವರ್ಗದವರಿಗೆ ರೂ 50) ನಗದು ಅಥವಾ ಡಿಡಿ/ಎಂಒ ಮೂಲಕ ಪ್ರಾಂಶುಪಾಲರು ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್‍ಪಿಡಿಎ, ಮೈಸೂರು ಇವರ ಹೆಸರಿಗೆ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು. ಅಥವಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.jsspda.org ಇ-ಮೇಲ್ jsspda@gmail.com ಅಥವಾ ದೂರವಾಣಿ ಸಂಖ್ಯೆ 0821 2548315, 2548316 ಸಂಪರ್ಕಿಸುವಂತೆ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.