ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ಸಾಲ ಮತ್ತು ಸಹಾಯಧನ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, 2020-21ನೇ ಉಪ್ಪಾರ ಮತ್ತು ಅದರ ಉಪಜಾತಿಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ.


ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಈ ಮೇಲ್ಕಂಡ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಆಯಾ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಭವನ, ರೆಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಇಲ್ಲಿಗೆ  ಸೆಪ್ಟೆಂಬರ್ 8 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು www.dbcdc.karnataka.gov.in  ವೆಬ್‍ಸೈಟ್‍ನಲ್ಲಿ ಪಡೆಯಬಹುದು ಅಥವಾ  ದೂರವಾಣಿ ಸಂಖ್ಯೆ 0824 2456544  ಸಂಪರ್ಕಿಸುವಂತೆ ದ.ಕ. ಜಿಲ್ಲಾ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Also Read  ಲಾಯಿಲ: ಬೈಕ್ ಸ್ಕಿಡ್ ► ಸವಾರ ಮೃತ್ಯು

error: Content is protected !!
Scroll to Top