74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.

 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಿಸುತ್ತಾ, ದೇಶಕಟ್ಟುವ ಕಾಯಕದಲ್ಲಿ ಜೊತೆಯಾಗೋಣ ಎಂದು ಹೇಳಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.

Also Read  ಕಾಸರಗೋಡು: ಹಲವು ಪ್ರಕರಣಗಳ ಆರೋಪಿ ಅರೆಸ್ಟ್

error: Content is protected !!
Scroll to Top