ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಕಡಬ ತಾಲೂಕು ಆಡಳಿತದ ವತಿಯಿಂದ ಕಡಬ  ಕಚೇರಿಯ ಮುಂಭಾಗದಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

 

ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಬಳಿಕ ಕಡಬದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ವಲ್ಸಮ್ಮ ಕೆ.ಟಿ., ಗಣೇಶ್ ಕೈಕುರೆ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಫಝಲ್ ಕೋಡಿಂಬಾಳ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್ ಕೆ., ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಠಾಣಾ ಉಪ ನಿರೀಕ್ಷಕ ರುಕ್ಮ ನಾಯ್ಕ್, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ಕಾಣಿಯೂರಿನ ಆರೋಗ್ಯ ಅಧಿಕಾರಿ ಡಾ| ದೀಪಕ್ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ಮನೋಹರ್ ಕೆ.ಟಿ. ಸ್ವಾಗತಿಸಿ, ಆನಂದ ಆಪ್ಟೆ ಮತ್ತು ವಿಜಯ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!

Join the Group

Join WhatsApp Group