(ನ್ಯೂಸ್ ಕಡಬ) newskadaba.com ನವದೆಹಲಿ , ಆ,15: ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ ಸರಳವಾಗಿ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲಿಗೆ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದ್ದಾರೆ.
ಕೊರೊನಾ ಜೊತೆಗೆ ಪ್ರವಾಹ. ಸಿಡಿಲಿಗೆ ಹಲವಾರು ಜನ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಆದ್ರೂ ಭಾರತದ ಆತ್ಮವಿಶ್ವಾಸಕ್ಕೆ ಯಾವುದೇ ಧಕ್ಕೆ ಉಂಟಾಗಿಲ್ಲ ಎಂದು ಹೇಳಿದ್ದಾರೆ. ಹಾಗೇ ಭಾರತದಲ್ಲಿ ಎಫ್ ಡಿಐ ನಲ್ಲಿ ಹೆಚ್ಚಳವಾಗಿದೆ. ವಿಶ್ವದ ದೊಡ್ಡ ದೊಡ್ಡ ಕಂಪೆನಿಗಳು ಭಾರತದತ್ತ ಮುಖಮಾಡಿದೆ. ಮೇಕ್ ಇನ್ ಇಂಡಿಯಾ ಜತೆ ಮೇಕ್ ಫಾರ್ ವರ್ಲ್ಡ್ ಗುರಿಯನ್ನು ಸಹ ಇಟ್ಟುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.