ಎಲಿಮಲೆ: ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಎಲಿಮಲೆ, ಆ. 15, 74ನೇ ನೇ ವರ್ಷದ ಸ್ವಾತಂತ್ರ್ಯಾಚರಣೆಯನ್ನು ನುಸ್ರತುಲ್ ಇಸ್ಲಾಂ ಅಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿ ವಠಾರದಲ್ಲಿ ಆಚರಿಸಲಾಯಿತು.

ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆಯವರು ದ್ವಜಾರೋಹಣಗೈದರು.
ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರ ಸ್ಮರಣಗೈದು ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗೆ ವಿಶೇಷ ಪ್ರಾರ್ಥನೆಯನ್ನ ನೆರವೇರಿಸಿದರು. ಜಮಾಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಸೂಫಿ ಎಲಿಮಲೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

 

error: Content is protected !!

Join the Group

Join WhatsApp Group