13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ,16: 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ವಿಕೃತಿ ಮೆರೆದಿದ್ದಾರೆ.ಉತ್ತರ ಪ್ರದೇಶದ ಲಖೀಂ ಪುರ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮನುಷ್ಯರು ಯಾರೂ ನೋಡಲಾಗದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

 

 

ಈ ಪ್ರಕರಣ ಉತ್ತರ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಥಳೀಯರು ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಆಕೆಗಾಗಿ ಪೋಷಕರು ಎಲ್ಲಡೆ ಹುಡುಕಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ವಿವಸ್ತ್ರಗೊಳಿಸಿ, ಆಕೆಯನ್ನು ಆಕೆಯ ದುಪ್ಪಟದಿಂದಲೇ ಕತ್ತು ಬಿಗಿದು ಕೊಲೆಗೈಯ್ಯಲಾಗಿತ್ತು. ಅಲ್ಲದೆ ಆಕೆಯ ಕಣ್ಣು ಕಿತ್ತು ನಾಲಿಗೆ ಕತ್ತರಿಸಿ ಹಾಕಲಾಗಿತ್ತು. ಕೂಡಲೇ ಪೋಷಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ . ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದಿದ್ದು, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ

 

error: Content is protected !!
Scroll to Top