ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,16: ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪುಜಾರಿರವರು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯ ಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್ ಎ. ಎಲ್ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು.

ಅನುಷ್ ರವರನ್ನು ಭೇಟಿ ಮಾಡಿದ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ಅವರೊಮದಿಗೆ ಶಾಸಕ ಎಸ್. ಅಂಗಾರ ಜಿ. ಪಂ ಸದಸ್ಯೆ ಆಶಾ ತಿಮ್ಮಪ್ಪ, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ತಾಲೂಕು ಅಧ್ಯಕ್ಷ ಹರೀಶ್ ಕಂಜಿಪಿಲಿ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೃಷ್ಣ ಶೆಟ್ಟಿ ಕಡಬ ಸೇರಿದಂತೆ ಆನೇಕರು ಉಪಸ್ಥಿತರಿದ್ದರು.

Also Read  ಸುಬ್ರಹ್ಮಣ್ಯ: ಹೊರರೋಗಿ ಚಿಕಿತ್ಸಾ ವಿಭಾಗಕ್ಕೆ ಶಾಸಕರಿಂದ ಶಂಕುಸ್ಥಾಪನೆ

error: Content is protected !!
Scroll to Top