ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,16:  ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಸೈಬರ್ ಕ್ರೈಂ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಾಮಾಜ ಸ್ವಾಸ್ಥ್ಯ ಕಾಪಾಡಲು ನಾವು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ನಾನು ಈ ಕುರಿತು ತಾಂತ್ರಿಕ ತಜ್ಞರ​​ ಜೊತೆಯೂ ಚರ್ಚೆಯೂ ಮಾಡಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು.ಅವರ ಕುಟಂಬಕ್ಕೂ ಪೊಲೀಸ್ ಭದ್ರತೆ ಒದಗಿಸುತ್ತೇವೆ ಎಂದರು.

Also Read  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ

 

error: Content is protected !!
Scroll to Top