ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ

(ನ್ಯೂಸ್ ಕಡಬ) newskadaba.com ಆ,16: ಕರಾವಳಿಯ ಖಾದ್ಯ ಪತ್ರೋಡೆಯನ್ನು ಬಾಲಿವುಡ್ ನಟಿ ಕಂಗನಾ ರಾಣಾವತ್ ಸವಿದಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.ಮಳೆಗಾಲದಲ್ಲಿ ತುಳುನಾಡಿನ ಗದ್ದೆ, ತೋಟಗಳಲ್ಲಿ ಯಥೇಚ್ಚವಾಗಿ ಬೆಳೆಯುವ ಕೆಸುವಿನ ಎಲೆಯ ಖಾದ್ಯಕ್ಕೆ ಕಂಗನಾ ರಾಣಾವತ್ ಬೌಲ್ಡ್ ಆಗಿದ್ದಾರೆ. ತುಳುನಾಡಿನ ಖಾದ್ಯ ಪತ್ರೊಡೆಯ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಂಗನಾ ಬರೆದುಕೊಂಡಿದ್ದಾರೆ.

 

 

 

ಹಿಮಾಚಲ ಪ್ರದೇಶದ ಕಂಗನಾಳಿಗೂ ಕೆಸುವಿನ ಪತ್ರೊಡೆ ಅಂದರೆ ಇಷ್ಟ. ತಮ್ಮ ತಾಯಿ ಪತ್ರೊಡೆಯನ್ನು ತಯಾರು ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಂಗನಾ ಟ್ವೀಟ್‍ಗೆ ಕರಾವಳಿಯ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದು, ಖುಷಿ ವ್ಯಕ್ತಪಡಿಸಿದ್ದಾರೆ.ಕರಾವಳಿಗರು ಮಳೆಗಾಲದಲ್ಲಿ ಒಂದೆರಡು ಬಾರಿಯಾದರೂ ಆಹಾರದಲ್ಲಿ ಕೆಸುವನ್ನು ಬಳಸುತ್ತಾರೆ. ಇದೀಗ ಕಂಗನಾ ರಾಣಾವತ್ ಪತ್ರೋಡೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಕೆಸುವಿಗೆ ದೇಶ ಮಟ್ಟದಲ್ಲಿ ಪ್ರಚಾರ ಸಿಕ್ಕಂತಾಗಿದೆ.

Also Read  ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ತಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಅಕ್ಕ..!!

 

error: Content is protected !!
Scroll to Top