ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,17:  ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು. ಶುಕ್ರವಾರದ ತನಕ ಕೆಲಸ ಮಾಡಿದ್ದ ಅವರು ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Also Read  ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದಕ್ಕೆ ವಿದ್ಯಾರ್ಥಿ ಡಿಬಾರ್ ➤ ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ

 

error: Content is protected !!
Scroll to Top