ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

(ನ್ಯೂಸ್ ಕಡಬ) newskadaba.com ಉಡುಪಿ. ಆ,17:  ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

 

ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ಮಾಸಿಕ ಅಂದಾಜು ರೂ.35 ಲಕ್ಷ ನಿರ್ವಹಣಾ ವೆಚ್ಚವಾಗುತ್ತಿದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಳ ಹಾಗೂ ಮಹನೀಯರು ಯಾವದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತ ಗೋವುಗಳನ್ನು ಪೋಷಣೆ ಮಾಡುತ್ತಿದ್ದಾರೆ.

Also Read  ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ

 

error: Content is protected !!
Scroll to Top