ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 17. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2020-21 ನೇ  ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬಹುದು. ಒಂದನೇ ತರಗತಿಯಿಂದ ಅಂತಿಮ ವರ್ಷದ ವೃತ್ತಿಪರ ಪದವಿ / ಡಿಪ್ರ್ಲೇಮಾವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 30 ಕೊನೆಯ ದಿನ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2020-21 ನೇ  ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನವನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ.ಓ,ಸಿ / ಪ್ರೋಷೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ  ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ದೂರವಾಣಿ ಸಂಖ್ಯೆ 0824 2450933 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

error: Content is protected !!
Scroll to Top