ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18.  2020ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡುತ್ತದೆ.

ಅರ್ಜಿ ಸಲ್ಲಿಸುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು ಕನ್ನಡ ಭಾಷೆಯಲ್ಲಿ ದ್ವಿ-ಪ್ರತಿಯೊಂದಿಗೆ ಸೆಪ್ಟೆಂಬರ್ 15 ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ ಸಂಕೀರ್ಣ, ನೆಲಮಹಡಿ, ಕೊಟ್ಟಾರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ ಸಂಕೀರ್ಣ, ನೆಲಮಹಡಿ, ಕೊಟ್ಟಾರ, ಮಂಗಳೂರು ದೂರವಾಣಿ ಸಂಖ್ಯೆ 0824-2451254 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

error: Content is protected !!
Scroll to Top