ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

 

 

ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ.ಕೊವಿಡ್ ನಂತರದ ಆರೈಕೆಗಾಗಿ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿದೆ. ಇಲ್ಲಿ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಏಮ್ಸ್ ತಿಳಿಸಿದೆ.

Also Read  ಭಾರೀ ಮಳೆಗೆ ಬಿದ್ದ ಮದುವೆ ಮನೆಯ ಪೆಂಡಲ್ ➤ 8 ಮಂದಿಗೆ ಗಾಯ

 

 

ಅಮಿತ್ ಶಾ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವುದು ಆಗಸ್ಟ್ 2ರಂದು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಅವರನ್ನು ಗುರುಗಾಂವ್‌ನ ಮೇದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮಗೆ ಕೊರೊನಾ ವೈರಸ್ ಸೋಂಕು ಬಂದಿರುವ ಬಗ್ಗೆ ಅಮಿತ್ ಶಾ, ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದರು.ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಮತ್ತೆ ಬೇರೆ ಆರೋಗ್ಯ ಸಮಸ್ಯೆ ಕಂಡುಬಂದಿದೆ.

 

error: Content is protected !!
Scroll to Top