ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು, 2019- 2020 ರ ನಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯಲು ಅವಕಾಶವನ್ನು ನೀಡುತ್ತಿದೆ.

ಪುತ್ತೂರು ಮತ್ತು ಅಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಧ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು ಮೌಲ್ಯಧರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಸಂಸ್ಥೆಗಳಲ್ಲೊಂದಾಗಿ ಕನ್ನಡನಾಡಿದ್ಯಂತ ಗುರುತಿಸಿಕೊಂಡೊದೆ. ಈಗಾಗಲೇ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಸೇರಲು ಇಚ್ಚಿಸುವ ವಿದ್ಯಾರ್ಥಿಗಳಿಗಾಗಿ ದಾಖಲಾತಿ ಪ್ರತ್ರಿಯೆಗಳು ಆರಂಭಗೊಂಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾಂಶುಪಾಲರು ಕಾಲೇಜಿನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾಲೇಜು ಸಂಪರ್ಕ ಸಂಖ್ಯೆ 08251 237455 ಅಥವಾ 9449259330 ಗಳನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಮಹೇಶ್ ತಿಳಿಸಿದ್ದಾರೆ.

Also Read  ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ

 

error: Content is protected !!
Scroll to Top