ಕೊರೋನಾ ದೃಢಪಟ್ಟವರ ಪ್ರಾಥಮಿಕ ಸಂಪರ್ಕ ಮಾಹಿತಿ ನೀಡದೇ ಇದ್ದಲ್ಲಿ ಕ್ರಿಮಿನಲ್ ಪ್ರಕರಣ- ಡಿ.ಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 18, ಕೊರೋನಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿಯು ಮತ್ತೊಂದು ಉಪಯುಕ್ತವಾದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಕೊರೋನಾ ಪರೀಕ್ಷೆ ಬಳಿಕ ಪರೀಕ್ಷಾ ವರದಿಯು ಪಾಸಿಟಿವ್ ಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂನಿಂದ ಕರೆ ಬರುತ್ತದೆ. ಅವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಅಂತವರು ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ದಾಖಲಾಗುವುದೇ ಎಂಬ ಬಗ್ಗೆ ಮಾಹಿತಿ ನೀಡಬೇಕು. ಆಸ್ಪತ್ರೆಗೆ ದಾಖಲಾಗುವುದಾದಲ್ಲಿ ಇಲಾಖೆಯ ವಾಹನದಲ್ಲಿ ತಕ್ಷಣ ತೆರಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಇನ್ನು ಯಾರಿಗೆಲ್ಲ ಪಾಸಿಟಿವ್ ಬರುತ್ತದೆ ಅಂತವರು ತಮ್ಮ ಪ್ರಾಥಮಿಕ ಸಂಪರ್ಕದ ಮಾಹಿತಿಯನ್ನು ನೀಡಬೇಕು. ಪ್ರಾಥಮಿಕ ಸಂಪರ್ಕದ ಸುಮಾರು ಐವತ್ತರಷ್ಟು ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದ ಮಾಹಿತಿ ನೀಡುವುದು ಅಗತ್ಯವಾಗಿದೆ. ತಪ್ಪಿದ್ದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

Also Read  ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..!

 

error: Content is protected !!
Scroll to Top