ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ ➤ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್‌ಕಡಬ) newskadaba.com ಸುಳ್ಯ, ಆ 18: ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ಕಳೆದ ದಿನ ಸಂಭವಿಸಿದ ಸರಕಾರಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಪಾದಾಚಾರಿಯೋರ್ವರು ಇಂದು ಮುಂಜಾನೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

ದೇವರ ಕೊಲ್ಲಿಯ ವಿಜಯ ಎಂಬವರು ಬಸ್ ಅಪಘಾತ ಸಂಭವಿಸುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬಸ್ ಅವರ ಮೇಲೆರಗಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ರವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ವಿಜಯ್ ರವರು ಮೃತಪಟ್ಟಿದ್ದಾರೆ. ಹಾಗೆಯೇ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Also Read  ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ

 

error: Content is protected !!
Scroll to Top