ಮೊರಾರ್ಜಿ ವಸತಿ ಕಾಲೇಜಿನ ಪ್ರವೇಶಕ್ಕೆ – ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 17. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ತಾಲೂಕು ಇಲ್ಲಿ 2020-21 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಿದೆ.

ಪ್ರಥಮ ಪಿಯುಸಿಯ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ. ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ. ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 2019-20 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾಥಿರ್ಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಈ ವಿದ್ಯಾಥಿರ್ಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ, ಇನ್ನಿತರ ಸಾಮಗ್ರಿಗಳು ಮತ್ತು ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಭ್ಯಥಿರ್ಯು ತನ್ನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲರನ್ನು ಹಾಗೂ ದೂರವಾಣಿ ಸಂಖ್ಯೆ: 8431739087 ನ್ನು ಸಂಪರ್ಕಿಸುವಂತೆ ದ.ಕ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಭುವನೇಶ್ ಬುಡಲೂರು ಸಿ.ಎ ಪರೀಕ್ಷೆ ತೇರ್ಗಡೆ

error: Content is protected !!
Scroll to Top