ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ – ಆ. 28 ರಂದು ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5ನೇ ತರಗತಿ) ವೃಂದದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದು, ಬಿ.ಇ.ಡಿ ಪದವಿ ಪಡೆದಿರುವ ಹಾಗೂ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ವೃಂದಕ್ಕೆ ಬಡ್ತಿ ಹೊಂದಲು ಅರ್ಹತೆ ಇರುವ ಶಿಕ್ಷಕರ ವಿಷಯವಾರು (ಆಂಗ್ಲ, ಹಿಂದಿ, ಪಿಸಿಎಂ, ಸಿಬಿಝೆಡ್, ಕಲಾ, ದೈಹಿಕ ಶಿಕ್ಷಣ) ಮೆರಿಟ್ ಆಧಾರಿತ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು 2020 ಜನವರಿ 1 ರಲ್ಲಿ ಇದ್ದಂತೆ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ತಕರಾರುಗಳಿದ್ದಲ್ಲಿ ಆಗಸ್ಟ್ 28 ರಂದು ಪೂರ್ವಾಹ್ನ 10.30 ಗಂಟೆಗೆ ಆಕ್ಷೇಪಣೆಗಳನ್ನು ಸಂಬಂಧಿಸಿದ ಶಿಕ್ಷಕರು ಖುದ್ದು ಹಾಜರಾಗಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ್‍ಬೈಲು, ಮಂಗಳೂರು ಇಲ್ಲಿಗೆ ಹಾಜರಾಗಿ ಉಪನಿರ್ದೇಶಕರು ಹಾಗೂ ಎಲ್ಲಾ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಅಂದು ಆಕ್ಷೇಪಣೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ನಂತರ ಬರುವ ಆಕ್ಷೇಪಣೆಗಳಿಗೆ ಅವಕಾಶವಿರುವುದಿಲ್ಲ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ, ಟಪಾಲಿನ ಮೂಲಕ ಇ-ಮೇಲ್ ಅಥವಾ ಇತರ ವ್ಯಕ್ತಿಗಳ ಮೂಲಕ ಆಕ್ಷೇಪಣೆ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ದೂರವಾಣಿ ಸಂಖ್ಯೆ 0824 2451239 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group