ಎಸ್‍.ಸಿ, ಎಸ್‍.ಟಿ ಕ್ರೀಡಾಪಟುಗಳಿಗೆ ಸಹಾಯಧನ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು. (ದೂ.0824-2451264) ಇಲ್ಲಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.

Also Read  ಮಲಗುವುದಾಗಿ ಹೇಳಿ ಕೋಣೆಗೆ ತೆರಳಿದ ಯುವಕ ನೇಣುಬಿಗಿದು ಆತ್ಮಹತ್ಯೆ..!!

error: Content is protected !!
Scroll to Top