ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಗರಿಷ್ಠ 12 ಸೆಂ. ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ಆಗುಂಬೆ 10, ಸುಬ್ರಮಣ್ಯ 8, ಮೂಡಬಿದಿದೆ 7, ಸುಳ್ಯ ಮತ್ತು ಕೊಪ್ಪ 5, ಮಂಗಳೂರು 3, ಅಂಕೋಲಾ 2, ಶಿವಮೊಗ್ಗ 2, ದಾವಣಗೆರೆ ಮತ್ತು ಚಿಂತಾಮಣಿಯಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

 

error: Content is protected !!

Join the Group

Join WhatsApp Group