ಮಂಗಳೂರು: ತಾಲೂಕಿನ 3 ಕಡೆ ಅಪಾರ್ಟ್ಮೆಂಟ್ ರೂಪದಲ್ಲಿ 69 ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಗುರುಪುರದಲ್ಲಿ ಈ ಹಿಂದೆ ಗುಡ್ಡ ಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಂತಹ ಘಟನೆಯು ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಬಾರಿ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗುತ್ತಿದೆ. ಗುಡ್ಡ ಕುಸಿತ ಉಂಟಾದ ಸ್ಥಳದಿಂದ 73 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಮನೆ ಬಾಡಿಗೆಗೆ ಪತ್ರಿ ತಿಂಗಳು 2500 ರೂ. ನೀಡಲಾಗುತ್ತಿದೆ.. ತಾಲೂಕು ವ್ಯಾಪ್ತಿಯಲ್ಲಿ ಎನ್‍ಐಟಿಕೆ ತಂಡವು ನಡೆಸಿದ ಸರ್ವೇಯಲ್ಲಿ 200 ರಿಂದ 260 ಮನೆಗಳು ಅಪಾಯದ ಪ್ರದೇಶದಲ್ಲಿ ಇದ್ದು, ಅವುಗಳನ್ನು ಅದಷ್ಟು ಬೇಗನೆ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ. ಅಂತಹ ಮನೆಗಳನ್ನು ಶೀಘ್ರದಲ್ಲಿ ಸ್ಥಳಾಂತರ ಮಾಡಲಾಗುವುದು ಎಂದು ಮಂಗಳವಾರ ನಡೆದ ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ತಹಶೀಲ್ದಾರ್ ಗುರುಪ್ರಸಾದ್  ಹೇಳಿದ್ದಾರೆ.

ಇದಕ್ಕೆ ಉತ್ತರಿಸಿದ ತಹಶೀಲ್ದಾರ್ , ಗೋಮಾಳ ಜಾಗಗಳನ್ನು ಭೂ ದಾಖಲೆಗಳೊಂದಿಗೆ ಗುರುತಿಸಿ, ಸರ್ವೇ ಮಾಡಲಾಗುವುದು. ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಂಗಳೂರು ತಾಲೂಕಿನಿಂದ ವಿಭಜನೆಗೊಂಡು ನೂತನವಾಗಿ ರಚನೆಯಾಗಿರುವ ಮೂಡಬಿದ್ರೆ ತಾಲೂಕಿಗೆ ಸರ್ಕಾರದಿಂದ ರೂ.10 ಕೋಟಿ ಅನುದಾನ ಬಿಡುಗಡೆಯಾಗಿದ್ದು ಇದರಿಂದ ತಾಲೂಕಿನ ಅಭಿವೃದ್ಧಿಗೆ ಸಹಾಯವಾಗಿದೆ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ತಿಳಿಸಿದ್ದಾರೆ. ಹೊಸದಾಗಿ ರಚನೆಗೊಂಡಿರುವ ಮೂಡಬಿದ್ರೆ ತಾಲೂಕಿಗೆ ಮಂಗಳ್ರರು ತಾಲೂಕು ಪಂಚಾಯತ್‍ನಿಂದ 8 ಸದಸ್ಯರು ಈಗಾಗಲೇ ವರ್ಗಾವಣೆಗೊಂಡಿದ್ದು, ಸದಸ್ಯರು ನೂತನ ತಾಲೂಕನ್ನು ಉತ್ತಮವಾಗಿ ಅಭಿವೃದ್ಧಿ ಕಾಣುವಂತೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

Also Read  ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ಅಪರ ತಹಶೀಲ್ದಾರರಿಗೆ ಮನವಿ


ಪಿಂಚಣಿ ಫಲಾನುಭವಿಗಳಿಗೆ ವೇತನವನ್ನು ಆನ್‍ಲೈನ್ ಮೂಲಕ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು. ಫಲಾನುಭವಿಗಳಿಗೆ ತಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕಚೇರಿಗೆ ಬರುವ ಅಗತ್ಯವಿಲ್ಲ. ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್‍ಗಳನ್ನು ವಾಟ್ಸಾಪ್ ಮುಖಾಂತರ ಕಳುಹಿಸಿ ಕೊಟ್ಟರೆ ಇಲಾಖೆಯಿಂದ ಲಿಂಕ್ ಮಾಡಿಕೊಡಲಾಗುವುದು. ಕೆಲವೊಂದು ಗ್ರಾಮ ಪಂಚಾಯತ್‍ಗಳ ಮಧ್ಯೆ ತಕರಾರು ಅರ್ಜಿಗಳು ಇವೆ ಅವುಗಳನ್ನು ಅದಷ್ಟು ಬೇಗನೆ ಸರ್ವೇ ನಡೆಸಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮಾ, ಕಾರ್ಯನಿರ್ವಹಣಾಧಿಕಾರಿ ಸದಾನಂದ, ತಾ.ಪಂ. ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದರು.

Also Read  ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ

error: Content is protected !!
Scroll to Top