ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಯಿತು. ಈ ಸಂಬಂಧ ಹೆಬ್ರಿ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದ್ದು ಆತ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Also Read  ರಾಜ್ಯದಲ್ಲಿ ಮತ್ತೆ 14 ಮಂದಿಗೆ ಕೋವಿಡ್ ಸೋಂಕು

 

 

error: Content is protected !!
Scroll to Top