ದಸರಾಗೂ ತಟ್ಟಿದ ಕೊರೋನಾ ಬಿಸಿ ➤ ವಿಶ್ವವಿಖ್ಯಾತ ಜಂಬೂ ಸವಾರಿಗೆ ಬೀಳುತ್ತಾ ಬ್ರೇಕ್..?

(ನ್ಯೂಸ್‌ಕಡಬ) newskadaba.com ಬೆಂಗಳೂರು, ಆ 20: ಮಹಾಮಾರಿ ಕೊರೋನಾ ಸೋಂಕಿನಿಂದ ಮೈಸೂರು ದಸರಾ ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಈ ಬಾರಿ ಅವಕಾಶ ಇಲ್ಲದಂತಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ ಸರಳ ದಸರಾ ಆಚರಣೆ ಮಾಡಿದರೂ ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯುವುದು ಅನುಮಾನ . ಏಕೆಂದರೆ ಜಂಬೂ ಸವಾರಿಯನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಕೊರೋನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಜಂಬೂ ಸವಾರಿಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆಗಳು ತೀರ ಕಡಿಮೆ ಎಂದು ತಿಳಿದುಬಂದಿದೆ.

Also Read  ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ

error: Content is protected !!
Scroll to Top