ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20:  ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

 

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಿದೆ. ಇಂದು ಮತ್ತು ಹಾಗೂ ಆ. 23ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಬಹುತೇಕ ಕಡೆ ಈಗಾಗಲೇ ಉತ್ತಮ ಮಳೆಯಾಗಿದೆ.

Also Read  ಯೋಗದಿಂದ ರೋಗ ದೂರವಾಗುತ್ತದೆ ➤ ಡಾ|| ಚೂಂತಾರು

 

ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ‌. ಇನ್ನೊಂದು ವಾರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

error: Content is protected !!
Scroll to Top