(ನ್ಯೂಸ್ ಕಡಬ) newskadaba.com ಸುಳ್ಯ, ಆ. 20: ಹಿಂದುಳಿದ ವರ್ಗಗಳ ನೇತಾರ ಹಾಗೂ ದಕ್ಷ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 105 ನೇ ಜನ್ಮ ದಿನಾಚರಣೆಯನ್ನು ತಾಲೂಕು ಕಛೇರಿ ಸುಳ್ಯದಲ್ಲಿ ಇಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ವಿಸ್ತರಣಾಧಿಕಾರಿಗಳಾದ ವಿಜಯ್ ಎಂ.ಪಿ. ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.