ವಿಶೇಷ ಚೇತನ ಮಗುವಿನ ಚಿಕಿತ್ಸೆಗೆ ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ ➤ ಮರು ಜೀವ ನೀಡಿದ ವೆನ್ಲಾಕ್ ವೈದ್ಯರ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಬದುಕಿ ಉಳಿಯುವುದೇ ಇಲ್ಲ ಎಂದು ಕೈಚೆಲ್ಲಿ ಬಿಟ್ಟ ವಿಕಲಚೇತನ ಮಗುವನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಯ ವೈದ್ಯರು ವಿಶೇಷ ಚಿಕಿತ್ಸೆಗೊಳಪಡಿಸಿ ಕೊರೊನಾ ಸೋಂಕಿನಿಂದ ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಕೃಷ್ಣಾಪುರದ ವಿಶೇಷ ಚೇತನ ಮಗುವಿಗೆ ಕೊರೊನಾ ಸೋಂಕು ಜೊತೆಗೆ ನ್ಯುಮೋನಿಯಾವೂ ತಗುಲಿ ಆರೋಗ್ಯ ತುಂಬಾ ಹದಗೆಟ್ಟಿತ್ತು. ಮಗುವನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರೂ ಮಗು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು.

ಇದರಿಂದ ಕಂಗಾಲಾದ ಕುಟುಂಬಸ್ಥರು ಮಗುವನ್ನು ಅಲ್ಲಿಂದ ಬಿಡುಗಡೆ ಮಾಡಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.. ವೈದ್ಯರ ಹಾಗೂ ಶುಶ್ರೂಷಕರ ಮಾನವೀಯ ಸೇವೆಯಿಂದ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಇದೀಗ 15 ದಿನಗಳ ಬಳಿಕ ಮಗು ಆಸ್ಪತ್ರೆಯಿಂದ ಬಿಡುಗಡೆಗೊಂಡಿದೆ. ಮಗು ಕೊರೊನಾ ಗೆದ್ದು ಬಂದಿರೋದನ್ನು ಕಂಡ ಕುಟುಂಬದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

error: Content is protected !!
Scroll to Top