(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಭವನದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ SDPI ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ” ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವವರು, ಉತ್ತಮ ಸಾಧನೆಗೈದು ಸಮಾಜಕ್ಕೆ ಉಪಕಾರವಾಗುವಂತಹ ಉತ್ತಮವಾದ ಕೊಡುಗೆಯನ್ನು ನೀಡಬೇಕು” ಎಂಬ ಸಂದೇಶವನ್ನು ನೀಡಿದರು. ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾದ ಅಡ್ವೊಕೇಟ್ ಅಥಾವುಲ್ಲಾ ಪುಂಜಾಲಕಟ್ಟೆ “ಇಂದು ವಿದ್ಯಾರ್ಥಿಗಳು ತನ್ನ ಪ್ರತಿಭೆಗಳನ್ನು ಕೊಲ್ಲುತ್ತಿದ್ದಾರೆ. ಇದಕ್ಕಾಗಿ ಕ್ಯಾಂಪಸ್ ಫ್ರಂಟ್ ಪ್ರತೀ ಘಟ್ಟದಲ್ಲೂ ವಿದ್ಯಾರ್ಥಿಗಳ ಬೆನ್ನೆಲುಬಾಗಿ ನಿಂತು ಅವರ ಪ್ರತಿಭೆಯನ್ನು ಸಮಾಜಕ್ಕೆ ತೋರಿಸಿಕೊಡಲಿದ್ದೇವೆ.” ಎಂದು ಸಂದೇಶ ಭಾಷಣವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಪಡೆದ ಸುಮಾರು ಹದಿನೆಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿಯಾದ ತ್ವಾಹಿರ್ ಇಂಜಿನಿಯರ್ ಸಮಾರೋಪ ಭಾಷಣ ಮಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ವಹಿಸಿದರು. ಮುಖ್ಯ ಅತಿಥಿಗಳಿಗಾಗಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರು ಸಾದಿಕ್ ಜರತ್ತಾರ್, ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ಇಮ್ರಾನ್ ಪಾಂಡವರಕಲ್ಲು, ಝಾಹೀದ್ ಹಾಗೂ ಉಸ್ಮಾನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಪ್ರಾಸ್ತಾವಿಕ ನಡೆಸಿ ಸ್ವಾಗತಿಸಿದರು. ಜಿಲ್ಲಾ ಸಮಿತಿ ಸದಸ್ಯ ಶಹೀರ್ ಪಾಂಡವರಕಲ್ಲು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.