ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು  ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ.  ಕೆಲವು‌ ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು.

 

ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ ಬೆಳಗಿನ ಜಾವ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ ಎಂದಿದ್ದಾರೆ.

Also Read  ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

 

error: Content is protected !!
Scroll to Top