ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21:  ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣೇಶ ಚತುರ್ಥಿ ಶುಭಾಷಯ ತಿಳಿಸಿದ್ದಾರೆ.

 

“ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವಿಘ್ನವಿನಾಶಕ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಕಳೆದು ನಾಡಿಗೆ ಸಮೃದ್ಧಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಬೆಂಗಳೂರಿನಲ್ಲಿ ಆಗಸ್ಟ್.22ರ ಶನಿವಾರ ಗಣೇಶ ಚತುರ್ಥಿ ಹಬ್ಬ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದೆ. ಗಣೇಶ ಹಬ್ಬದ ದಿನ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ರದ್ದುಗೊಳಿಸಲಾಗಿದೆ. ಪವಿತ್ರ ಹಬ್ಬದ ದಿನದಂದು ನಗರದಲ್ಲಿ ಯಾವುದೇ ರೀತಿ ಪ್ರಾಣಿ ವಧೆಯನ್ನು ಮಾಡುವಂತಿಲ್ಲ. ಜೊತೆಗೆ ಮಾಂಸ ಮಾರಾಟ ಅಂಗಡಿಗಳನ್ನು ಬಂದ್ ಮಾಡುವಂತೆ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ಸೂಚನೆ ನೀಡಿದೆ.

Also Read  ’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ - ಸಿಎಂ ಸಿದ್ದರಾಮಯ್ಯ

 

error: Content is protected !!
Scroll to Top