ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21 : ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ೫೦ ಲಕ್ಷ ರೂಪಾಯಿ ಪರಿಹಾರವನ್ನೂ ಕೂಡ ಘೋಷಿಸಿದ್ದಾರೆ.

ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು  ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ  ತನಿಖೆ ನಡೆಸಿ ೭ ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ರವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಆತ್ಮಹತ್ಯೆಗೆ ಜಿಲ್ಲಾ ಪಂಚಾಯತ್ ಸಿಇಒ ಕಾರಣ ಎಂದು ಆರೋಪಿಸಿದ ವೈದ್ಯರು ಹಾಗೂ ಇತರೆ ಸಿಬ್ಬಂದಿ ಗುರುವಾರದಂದು ರಾತ್ರಿಯಿಡೀ ಪ್ರತಿಭಟನೆಯಲ್ಲಿ ತೊಡಗಿದ್ದರು.

Also Read  ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ

error: Content is protected !!
Scroll to Top