ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ.

ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ

 

error: Content is protected !!
Scroll to Top