ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿನ ನಡ ಪ್ರೌಢಶಾಲೆಯ ಗಣಿತ ಶಿಕ್ಷಕ ಯಾಕೂಬ್ ಅವರು ಈ ಬಾರಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಾಲೆಯಲ್ಲಿ ಗಣಿತ ಪ್ರಯೋಗಾಲಯ ಆರಂಭಿಸುವ ಮೂಲಕ ಈ ವಿಷಯಕ್ಕೆ ಹೊಸ ಆಯಾಮ ತಂದುಕೊಟ್ಟಿದ್ದರು. ಸೆಪ್ಟೆಂಬರ್‌ 5 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Also Read  ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ

 

error: Content is protected !!
Scroll to Top