SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,22:  ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ.

 

 

 

ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಮುಖ್ಯ ಪರೀಕ್ಷೆ ಬರೆಯದೇ ಇರುವ ಅಭ್ಯರ್ಥಿಗಳನ್ನು ಪೂರಕ ಪರೀಕ್ಷೆಯಲ್ಲಿ ಮೊದಲ ಅವಕಾಶ ಎಂದೇ ಪರಿಗಣಿಸಲಾಗುತ್ತದೆ. ಇಂತಹ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

 

Also Read  ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ !

 

SSLC ಪೂರಕ ಪರೀಕ್ಷೆಯ ವೇಳಾಪಟ್ಟಿ

ಸೆ.21 ಗಣಿತ, ಸಮಾಜಶಾಸ್ತ್ರ

ಸೆ.22 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)

ಸೆ.23 ಸಮಾಜಶಾಸ್ತ್ರ

ಸೆ.24 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಸೆ. 25 ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಸೆ. 26 ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ

ಸೆ. 28 ಬೆಳಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಸೆ. 29 ಜಿಟಿಎಸ್ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

Also Read  ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..!

 

 

error: Content is protected !!
Scroll to Top